Supreme Court : ನೀವು ನಿಜವಾಗಲೂ ಭಾರತೀಯರೇನ್ರಿ? ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಛೀಮಾರಿ !!

Share the Article

Supreme Court : ವಿದೇಶಗಳಲ್ಲಿ ಹೋಗಿ ಪದೇ ಪದೇ ಭಾರತದ ಬಗ್ಗೆ ಅವಹೇಳನಕಾರಿ ಮಾತನಾಡಿ ಇದಾಗಲೇ ಭಾರತದ ಮೇಲೆ ಗೌರವ ಇಟ್ಟುಕೊಂಡಿರುವವರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಹೌದು, ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ನೀಡಿರುವ ಹೇಳಿಕೆಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಮಾಡಿದ ಹೇಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸೋಮವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಾಲಯವು ರಾಹುಲ್ ಗಾಂಧಿಯನ್ನು ಖಂಡಿಸಿ, ಚೀನಾ 2000 ಕಿಲೋಮೀಟರ್‌ಗಳಷ್ಟು ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹೀಗೆ ಹೇಳುತ್ತಿರಲಿಲ್ಲ ಎಂದು ಹೇಳಿದೆ.

ಅಲ್ಲದೆ 2000 ಕಿ.ಮೀ. ಭಾರತದ ಭೂಮಿಯನ್ನು ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಇದನ್ನೆಲ್ಲಾ ಹೇಳುವುದಿಲ್ಲ ಎಂದು ನ್ಯಾಯಮೂರ್ತಿ ದತ್ತ ಅವರು ಹೇಳಿದ್ದಾರೆ. ಆದಾಗ್ಯೂ, ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರ ಪೀಠವು, ಜೂನ್ 2020 ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಹಿಂಸಾತ್ಮಕ ಘರ್ಷಣೆಯ ಕುರಿತಾದ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.

ಇನ್ನು ಕಾಂಗ್ರೆಸ್ ನಾಯಕನ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, “ಅವರು ಈ ವಿಷಯಗಳನ್ನು ಹೇಳಲು ಸಾಧ್ಯವಾಗದಿದ್ದರೆ… ಅವರು ವಿರೋಧ ಪಕ್ಷದ ನಾಯಕರಾಗಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದರು. ಈ ವೇಳೆ ಇದಕ್ಕೂ ಗರಂ ಆದ ನ್ಯಾಯಾಧೀಶರು, “ಹಾಗಾದರೆ ನೀವು ಸಂಸತ್ತಿನಲ್ಲಿ ಏಕೆ ಅಂತಹ ವಿಷಯಗಳನ್ನು ಹೇಳಬಾರದು. ಸಾಮಾಜಿಕ ಮಾಧ್ಯಮದಲ್ಲಿ ಏಕೆ ಹೇಳಬೇಕು?” ಎಂದು ಕೇಳಿದರು.

ರಾಹುಲ್ ಹೇಳಿದ್ದೇನು?

2022 ರಲ್ಲಿ ಭಾರತ್ ಜೋಡೋ ಯಾತ್ರೆಯನ್ನು ನಡೆಸಿದ್ದ ಸಂದರ್ಭ ರಾಹುಲ್‌ ಗಾಂಧಿ, ಚೀನಾ 2,000 ಚದರ ಕಿಲೋಮೀಟರ್ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿದೆ. ಮಾತ್ರವಲ್ಲದೇ ಚೀನಾ ಅರುಣಾಚಲ ಪ್ರದೇಶದಲ್ಲಿ (Arunachal Pradesh) ಭಾರತೀಯ ಸೈನಿಕರ (Indian Army) ಮೇಲೆ ದಾಳಿ ಮಾಡುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Peacock death: 19 ರಾಷ್ಟ್ರಪಕ್ಷಿ ನವಿಲುಗಳ ನಿಗೂಢ ಸಾವು : ತನಿಖೆಗೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ

Comments are closed.