Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ – ನಾಳೆ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕೇರಳ ಕರಾವಳಿಯಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿಯು ಕರಾವಳಿ ತೀರದಲ್ಲೇ ಉತ್ತರಕ್ಕೆ ಚಲಿಸಲಿದ್ದು ನಾಳೆ ಸಂಜೆ ಉಡುಪಿ ಜಿಲ್ಲೆಯ ತನಕ ಚಲಿಸಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ . ಈಗಿನಂತೆ ಆಗಸ್ಟ್ 6ರಂದು ಮಾತ್ರ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆ ಸ್ವಲ್ಪ ಹೆಚ್ಚಿರಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 6ರಂದು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ಆಗಸ್ಟ್ 7ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಒಳನಾಡು : ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದೆ. ಇವತ್ತು ಸಂಜೆ, ರಾತ್ರಿ ವೇಳೆ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಕೆಲವು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 8ರ ತನಕ ಹಾಗೂ ಉತ್ತರ ಒಳನಾಡಿನಲ್ಲಿ ಆಗಸ್ಟ್ 10ರ ತನಕವೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ. ಈ ಭಾಗಗಳಲ್ಲಿ ಆಗಸ್ಟ್ 14ರ ನಂತರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಬಂಗಾಳಕೊಲ್ಲಿಯಲ್ಲಿ ಅಥವಾ ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ತಿರುಗುವಿಕೆ, ವಾಯುಭಾರ ಕುಸಿತದಂತಹ ವಿದ್ಯಮಾನಗಳು ಉಂಟಾದರೆ ಮಾತ್ರ ಮಳೆಯಾಗಬಹುದು.
ಮುಂಗಾರು ದುರ್ಬಲಗೊಳ್ಳಲು ಫೆಸಿಫಿಕ್ ಸಾಗರದಲ್ಲಿ ಮೇಲಿಂದ ಮೇಲೆ ಉಂಟಾಗುವ ಪ್ರಭಲ ಭೂಕಂಪನಗಳು ಹಾಗೂ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ನ ಪೂರ್ವ ಕರಾವಳಿಯಿಂದ ಹಿಡಿದು ಜಪಾನ್, ರಶ್ಯಾ ತನಕವೂ ಅಲ್ಲಲ್ಲಿ ಉದ್ಭವಿಸುತ್ತಿರುವ ಜ್ವಾಲಾಮುಖಿಗಳ ಕಾರಣವೂ ಇರಬಹುದು.
Comments are closed.