Congress Meeting: ಚುನಾವಣಾ ಅಕ್ರಮ ಖಂಡಿಸಿ ರಾಹುಲ್ ಗಾಂಧಿ ಹೋರಾಟ ಹಿನ್ನೆಲೆ – ನಾಳೆ ಕೈ ನಾಯಕರಿಂದ ಪೂರ್ವಸಿದ್ಧತಾ ಸಭೆ

Share the Article

Congress Meeting: ಜು.8ರಂದು ಚುನಾವಣಾ ಅಕ್ರಮ ಖಂಡಿಸಿ ರಾಹುಲ್ ಗಾಂಧಿ ಹೋರಾಟ ಹಿನ್ನೆಲೆ ಹೋರಾಟದ ಬಗ್ಗೆ ಚರ್ಚಿಸಲು ನಾಳೆ ಕೈ ನಾಯಕರಿಂದ ಪೂರ್ವಸಿದ್ಧತಾ ಸಭೆ ಕರೆಯಲಾಗಿದೆ. ಸಂಜೆ 6 ಗಂಟೆಗೆ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಲಿದೆ. ಆಗಸ್ಟ್‌ ೦೫ರಂದು ನಡೆಯಬೇಕಾಗಿದ್ದ ಸಭೆಯನ್ನು ಶಿಬು ಸೂರೇನ್ ನಿಧನರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ರಾಷ್ಟ್ರೀಯಮಟ್ಟದಲ್ಲಿ ಗಮನಸೆಳೆಯಲು ಹೋರಾಟ ರೂಪುರೇಷೆ ಸಿದ್ಧಪಡಿಸುವ ಬಗ್ಗೆ ಚರ್ಚಿಸಲಿರುವ ನಾಯಕರು, ಫ್ರೀಡಂಪಾರ್ಕ್ ನಲ್ಲಿ ನಡೆಯುವ ಹೋರಾಟ ಕುರಿತು ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಉಸ್ತುವಾರಿ ಸುರ್ಜೇವಾಲಾ, ಸಿಎಂ, ಡಿಸಿಎಂ, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಗಳು.

ಜೊತೆಗೆ ಎಲ್ಲಾ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಕಳೆದ ಲೋಕಸಭೆಯ ಪರಾಜಿತ ಅಭ್ಯರ್ಥಿಗಳು, ವಿಧಾನಸಭೆಯ ಪರಾಜಿತ ಅಭ್ಯರ್ಥಿಗಳು, ನಿಗಮ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳು, ಮುಂಚೂಣಿ ಘಟಕ, ಸೆಲ್, ವಿಭಾಗಗಳ ರಾಜ್ಯಾಧ್ಯಕ್ಷರುಗಳು, ಬಿಬಿಎಂಪಿ ವ್ಯಾಪ್ತಿಯ ಪ್ರಮುಖ ನಾಯಕರು ಕೂಡ ಭಾಗಿಯಾಗಲಿದ್ದಾರೆ.

ಇದನ್ನು ಓದಿ: Amith Shah : ದೇಶದಲ್ಲಿ ಅತಿ ಹೆಚ್ಚು ದಿನಗಳ ಕಾಲ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!!

Comments are closed.