Home News KRS Dam: ಟಿಪ್ಪು ಅಡಿಗಲ್ಲು – ಸಚಿವ ಮಹದೇವಪ್ಪ ಹೇಳಿಕೆ ಸತ್ಯ – ವಿವಾದ ಸೃಷ್ಟಿಸುವುದು...

KRS Dam: ಟಿಪ್ಪು ಅಡಿಗಲ್ಲು – ಸಚಿವ ಮಹದೇವಪ್ಪ ಹೇಳಿಕೆ ಸತ್ಯ – ವಿವಾದ ಸೃಷ್ಟಿಸುವುದು ಬೇಡ – ಮಾಜಿ ಮೇಯರ್ ಸ್ಪಷ್ಟನೆ

Hindu neighbor gifts plot of land

Hindu neighbour gifts land to Muslim journalist

KRS Dam: ಆಣೆಕಟ್ಟೆಗೆ ಅಡಿಗಲ್ಲು ಟಿಪ್ಪು ಸುಲ್ತಾನ್ ಹಾಕಿದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಸತ್ಯ. ಆದರೆ, ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಮೇಯರ್ ಪುರುಷೋತ್ತಮ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು. ಆದರೇ ಯುದ್ಧಗಳಲ್ಲಿ ಸೋತ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಗೊಳ್ಳಲಿಲ್ಲ. ಅದನ್ನು ಮಹದೇವಪ್ಪ ಅವರು ಟಿಪ್ಪು ಅಡಿಗಲ್ಲು ಹಾಕಿದ್ದಾರೆ ಎಂದು ಅವರ ಸಾಧನೆ ಹೇಳಿದ್ದಾರೆ. ಇತಿಹಾಸದ ಸತ್ಯವನ್ನು ಒಪ್ಪಿಕೊಳ್ಳಬೇಕು. ಇದಕ್ಕೆ ಕೆಆರ್‌ಎಸ್ ಬಳಿಯೇ ಸಾಕ್ಷಿಯೂ ಇದೆ ಎಂದರು.

1911ರ ಸಂದರ್ಭದಲ್ಲಿ ನಾಲ್ವಡಿ ಕೃಷ್ಣ ರಾಜ ಒಡೆಯ‌ರ್ ಅವರು ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುವ ವೇಳೆ ಟಿಪ್ಪುಸುಲ್ತಾನರ ಅಡಿ ಗಲ್ಲು ಸಿಕ್ಕಿದೆ. ಅದನ್ನು ಕೂಡ ಅಣೆಕಟ್ಟೆ ಬಳಿ ಸ್ಥಾಪನೆ ಮಾಡಿದ್ದಾರೆ. ಕೆಆರ್ರ ಎಸ್ ನಿರ್ಮಾತೃ ನಾಲ್ವಡಿಯವರೇ ಎಂಬುದರಲ್ಲಿ ಎರಡು ಮಾತಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅತೀ ಹೆಚ್ಚು ಗೌರವ ಕೊಡುವುದು ದಲಿತ ಸಮುದಾಯ. ಸಚಿವ ಮಹದೇವಪ್ಪ ಅವರು ನಾಲ್ವಡಿ ಮತ್ತು ರಾಜ ಮನೆತನದವರ ವಿರುದ್ಧ ಮಾತನಾಡಿಲ್ಲ. ಹೀಗಾಗಿ ಮುಸ್ಲಿಂ ಸಮುದಾಯದ ಓಲೈಕೆ ಗಾಗಿ ಮಾತನಾಡಿದ್ದಾರೆ ಎಂಬುದು ಸುಳ್ಳು. ಕೂಡಲೇ ಇಂತಹ ವಿವಾದ ಸೃಷ್ಟಿಸುವ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರಾಜವಂಶಸ್ಥರಾದ ಯದುವೀರ್ ಅವರ ಮೇಲೆ ನಮಗೆ ಅಪಾರ ಗೌರವವಿದೆ. ಆದರೆ ಅವರು ರಾಜ ಸಮುದಾಯದ ಓಲೈಕೆಗಾಗಿ ಈ ರೀತಿ ಹೇಳಿಕೆ ನೀಡಬಾರದು. ಬದಲಾಗಿ ಕೆಆರ್ಜ ಎಸ್ ಅಣೆಕಟ್ಟೆ ಬಳಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಮಾನವಾಗಿ ವಿಶ್ವೇಶ್ವರಯ್ಯ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಮೊದಲು ಆ ಪ್ರತಿಮೆಯನ್ನು ತೆಗೆಯಬೇಕು. ವಿಶ್ವೇಶ್ವರಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸರಿ ಸಮಾನರೇ? ವಿಶ್ವೇಶ್ವರಯ್ಯ ಅವರು ಒಬ್ಬ ಇಂಜಿನಿಯರ್ ಅಷ್ಟೇ. ಅದರ ಬಗ್ಗೆ ಯದುವೀರ್ ಚಿಂತಿಸಲಿ ಎಂದರು.

ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್. ಭಗವಾನ್ ಮಾತನಾಡಿ, ಸಚಿವ ಹೆಚ್.ಸಿ. ಮಹದೇವಪ್ಪ ಟಿಪ್ಪು ಸುಲ್ತಾನ್ ಕೆಆರ್‌ಎಸ್ ಅಣೆಕಟ್ಟೆ ಕಟ್ಟಲು ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಅಷ್ಟೇ. ಕನ್ನಂಬಾಡಿ ಕಟ್ಟೆಗೆ ಹೋಗಿ ನೋಡಿ ಗೇಟಿನ ಒಳ ಭಾಗದಲ್ಲಿ 3 ಕಲ್ಲುಗಳಿವೆ. ಒಂದು ಅರೇಬಿಕ್, ಒಂದು ಇಂಗ್ಲಿಷ್, ಒಂದು ಕನ್ನಡದಲ್ಲಿ ಇದೆ. ಅದರಲ್ಲಿ ಭಗವಂತನ ಕರುಣೆಯಿಂದ ಆಣೆಕಟ್ಟೆ ಕಟ್ಟಿಸಲು ಹೊರಟಿದ್ದೇನೆ, ಶಂಕುಸ್ಥಾಪನೆ ಮಾಡಿದ್ದೇನೆ ಎಂದು ಬರೆದಿದೆ ಎಂದು ಹೇಳಿದರು.

ಡಾ.ರಾಜಕುಮಾರ್ ಅವರ ಚಿತ್ರಗೀತೆಯೊಂದರಲ್ಲಿ ‘ಕಾವೇರಿಯನ್ನು ಹರಿಯಲು ಬಿಟ್ಟು ವಿಶ್ವೇಶ್ವರಯ್ಯ ಶ್ರಮ ಪಡದಿದ್ದರೆ’ ಎಂದು ಹಾಡಿಸಿದ್ದಾರೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡುವ ಸಾಲುಗಳು. ಇದರಿಂದ ಕನ್ನಂಬಾಡಿ ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅವಮಾನ ಮಾಡಿದಂತೆ. ಏಕೆಂದರೆ ಅಣೆಕಟ್ಟೆ ಕಟ್ಟುವಾಗ ವಿಶ್ವೇಶ್ವರಯ್ಯ ಒಂದು ವರ್ಷ ಮಾತ್ರ ಇದ್ದರು. ಕನ್ನಂಬಾಡಿ ಕಟ್ಟೆ ಕಟ್ಟಲು 21 ವರ್ಷಗಳು ಬೇಕಾಯಿತು ಎಂದು ವಿವರಿಸಿದರು.

ಇದನ್ನೂ ಓದಿ: Alamatti Dam: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸದಂತೆ ಕರ್ನಾಟಕವನ್ನು ತಡೆಯಿರಿ – ಕೇಂದ್ರಕ್ಕೆ ಮಹಾರಾಷ್ಟ್ರ ಒತ್ತಾಯ