ಮಂಗಳೂರು: ವಾಹನ‌ ಅಡ್ಡಗಟ್ಟಿ ದರೋಡೆ ಮತ್ತೆ 6 ಮಂದಿಯ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಳ್ಳತನ, ದರೋಡೆ ಜೊತೆಗೆ ವಾಹನ ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿ ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ತಮ್ಮ‌ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಏಪ್ರಿಲ್ 1ರಂದು ಮೂಡಬಿದ್ರೆ, ಮುಲ್ಕಿ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಈ ಮೂಲಕ 28 ಅಧಿಕೃತ ಪ್ರಕರಣಗಳಿಗೆ ಸಂಬಂಧಿಸಿ ಒಟ್ಟು 15 ಮಂದಿಯ ಬಂಧನವಾಗಿದ್ದು, ಓರ್ವ ಪ್ರಮುಖ ಆರೋಪಿ ಸೇರಿದಂತೆ ಇನ್ನೂ ಹಲವಾರು ಮಂದಿಯ ಬಂಧನ ಆಗಬೇಕಾಗಿದೆ.

ಬಂಧಿತರನ್ನು ರಾಕೇಶ್, ಅರ್ಜುನ್, ಮೋಹನ್, ಮುಹಮ್ಮದ್ ಝುಬೈರ್, ಇಬ್ರಾಹಿಂ ಲತೀಫ್ ಹಾಗೂ ಬೋಳಿಯಾರ್ ಮನ್ಸೂರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದರು.

ಬಂಧಿತರ ವಿರುದ್ದ ಮಂಗಳೂರು ನಗರದಲ್ಲಿ 7, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ 8 ಪ್ರಕರಣಗಳು, ಹಾಸನ ಜಿಲ್ಲೆಯಲ್ಲಿ 2, ಚಿಕ್ಕಮಗಳೂರು 3, ಕೊಡಗು 5, ಉಡುಪಿ 2 ಹಾಗೂ ಬೆಂಗಳೂರು ನಗರದಲ್ಲಿ 1 ಪ್ರಕರಣ ದಾಖಲಾಗಿದೆ. ಕಾರು, ಮೊಬೈಲ್‌ ಗಳು, ಏರ್‌ಗನ್, ಚಿನ್ನ ಬೆಳ್ಳಿ ಆಭರಣ ಸೇರಿದಂತೆ ಒಟ್ಟು 41.82 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

Leave A Reply

Your email address will not be published.