

CRPF: ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಸಂತ್‌ಗಢದ (Basantgarh) ಕಾಂಡ್ವಾ (Kadwa) ಬಳಿ ನಡೆದಿದೆ.
ಗುರುವಾರ ಬೆಳಗ್ಗೆ 10:30ರ ಸುಮಾರಿಗೆ ಬಸಂತ್‌ಗಢದಿಂದ ಕಾರ್ಯಾಚರಣೆ ಮುಗಿಸಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 187ನೇ ಬೆಟಾಲಿಯನ್‌ಗೆ ಸೇರಿದ ವಾಹನದಲ್ಲಿ 23 ಸಿಬ್ಬಂದಿ ಇದ್ದರು.
ಅಪಘಾತದಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದು 16 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಎಂದು ಹೆಚ್ಚುವರಿ ಎಸ್‌ಪಿ ಉಧಂಪುರ ಸಂದೀಪ್ ಭಟ್ ಅವರು ಮಾಹಿತಿ ನೀಡಿದ್ದಾರೆ.













