Home News Dharmasthala: ಬೆಳ್ತಂಗಡಿ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ: ಓರ್ವನ ಬಂಧನ

Dharmasthala: ಬೆಳ್ತಂಗಡಿ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ: ಓರ್ವನ ಬಂಧನ

Hindu neighbor gifts plot of land

Hindu neighbour gifts land to Muslim journalist

Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆ.6 (ನಿನ್ನೆ) ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಮಾಡಿ, ಕ್ಯಾಮೆರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣ ನಡೆದಿತ್ತು.

ಇದೀಗ ಈ ಘಟನೆಗೆ ಸಂಬಂಧಪಟ್ಟಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ 189(2),191(2),324(5),352,307, ಜೊತೆಗೆ 190BNS ಅಡಿಯಲ್ಲಿ ಸುಮಾರು 15ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು.

ವರದಿಯ ಪ್ರಕಾರ, ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು ಚಾಲಕ ಸೋಮನಾಥ ಸಪಲ್ಯ (48) ನನ್ನು ಆ.7 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಸಮರ್ಥ್‌ ಆರ್‌ ಗಾಣಿಗೇರಾ ನೇತೃತ್ವದ ತಂಡ ಬಂದನ ಮಾಡಿ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Dharmasthala: ಧರ್ಮಸ್ಥಳ: 13ನೇ ಸ್ಥಳ ಶೋಧ ಇಂದಿಲ್ಲ, ಮಾಸ್ಕ್‌ಮ್ಯಾನ್‌ನ ತೀವ್ರ ವಿಚಾರಣೆ