

Mangalore: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬುವವರು ದೂರು ನೀಡಿದ್ದು, ಈ ಮೂಲಕ ಪ್ರಕರಣ ದಾಖಲಾಗಿದೆ. ಗಿರೀಶ್ ಮಟ್ಟಣ್ಣನವರ್ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರು ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸನ್ನು ಉಂಟಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡುವ ಅಪಾಯಕಾರಿ ಹೇಳಿಕೆ ಎಂದು ದೂರಿನಲ್ಲಿ ಚರಣ್ ಶೆಟ್ಟಿ ಉಲ್ಲೇಖ ಮಾಡಿದ್ದಾರೆ.
ಪುನೀತ್ ಕೆರೆಹಳ್ಳಿ ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂದು ಆರೋಪ ಮಾಡಿ ಬೆಳ್ತಂಗಡಿ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ ಎನ್ನುವವರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.













