

Dr Vishnuvardhan: 35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು. ನಂತರದಲ್ಲಿ ವಿಷ್ಣು ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕವಾಗಿ ಘೋಷಿಸಬೇಕೆಂಬ ಹೋರಾಟ ನಡೆಯುತ್ತಲೇ ಇತ್ತು. ಆದ್ರೆ ಹೈಕೋರ್ಟ್ ಸೂಚನೆ ಮೇರೆ ರಾತ್ರೋರಾತ್ರಿ ಸಮಾಧಿಯನ್ನ ತೆರವುಗೊಳಿಸಲಾಗಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ













