Mangalore: ದ.ಕ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಲ್ಲಿ ರಕ್ತಹೀನತೆ ಪತ್ತೆ!!

Mangalore: ಮಕ್ಕಳಲ್ಲಿ ರಕ್ತಹೀನತೆ ತಡೆಯಲು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ ಹಿಮೋಗ್ಲೋಬಿನ್ ಪರೀಕ್ಷೆ ವರದಿಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 5063 ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ.

ಒಂದು ತಿಂಗಳಿನಿಂದ ಜಿಲ್ಲೆಯ 1ನೇ ತರಗತಿಯಿಂದ 10 ರವರೆಗಿನ ಸರಕಾರಿ ಮತ್ತು ಅನುದಾನಿತ ಶಾಲೆಗಳ 49,575 ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ರಕ್ತಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 2609 ಮಂದಿಗೆ ಸೌಮ್ಯ ಪ್ರಕರಣ, 2444 ಮಂದಿಗೆ ಮಧ್ಯಮ ಮತ್ತು 10 ಮಂದಿಗೆ ತೀವ್ರ ರಕ್ತಹೀನತೆ ಇರುವುದು ಪತ್ತೆಯಾಗಿದೆ.
“ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ’ ಎಂಬ ಹೆಸರಿನಲ್ಲಿ ಅಭಿಯಾನ ನಡೆದಿದ್ದು, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಒಬ್ಬರು ವೈದರು, ನರ್ಸ್, ಕಣ್ಣಿನ ತಜ್ಞರು ಎಲ್ಲಾ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಎಷ್ಟಿದೆ? ಎಂದು ಪರೀಕ್ಷೆ ನಡೆಸಿದರು.
Comments are closed.