Bengaluru: ಬೆಂಗಳೂರಿನ ಈ ನಗರದಲ್ಲಿ 1,650 ಕೋಟಿ ವೆಚ್ಚದಲ್ಲಿ ಅಂತರ್ರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ – CM ಸಿದ್ದರಾಮಯ್ಯ ಅನುಮೋದನೆ

Share the Article

Bengaluru : ಸೂರ್ಯ ನಗರದಲ್ಲಿ 100 ಎಕರೆ ವಿಸ್ತೀರ್ಣದಲ್ಲಿ 1650 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯ ವತಿಯಿಂದ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ಹೌದು, ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ. ಬೆಂಗಳೂರಿನ ಬೊಮ್ಮಸಂದ್ರದ ಸೂರ್ಯ ನಗರದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಹೊಂದಿರುವ ವಿಶ್ವ ದರ್ಜೆಯ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿ(ಕೆಎಚ್‌ಬಿ)ಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಅನುಮೋದನೆ ನೀಡಿದ್ದಾರೆ.

80 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳಬಹುದಾದ ಕ್ರಿಕೆಟ್ ಮೈದಾನ, 8 ಒಳಾಂಗಣ ಕ್ರೀಡೆಗಳ ಕ್ರೀಡಾಂಗಣ ಮತ್ತು 8 ಹೊರಾಂಗಣ ಕ್ರೀಡೆಗಳ ಕ್ರೀಡಾಂಗಣಗಳು, ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಹಾಸ್ಟೆಲ್‌, ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಅತಿಥಿಗೃಹಗಳು ಇರಲಿವೆ. ಈ ಯೋಜನೆಯನ್ನು ಕರ್ನಾಟಕ ಗೃಹ ಮಂಡಳಿಯಿಂದಲೇ ಅನುಷ್ಠಾನಗೊಳಿಸಲಾಗುತ್ತದೆ. ಕ್ರೀಡಾಂಗಣ ನಿರ್ಮಾಣದ ಜೊತೆಗೆ ನಿರ್ವಹಣೆಗೂ ಗೃಹ ಮಂಡಳಿ ಅಧಿಕಾರಿಗಳು ಸಭೆಯಲ್ಲಿ ಆಸಕ್ತಿ ತೋರಿಸಿದರು ಎಂದು ತಿಳಿದು ಬಂದಿದೆ.

Mangalore: ಪೇಟೆಗೆ ಹೋಗುವುದಾಗಿ ಹೇಳಿ ಹೋದ ಯುವತಿ ನಾಪತ್ತೆ!

Comments are closed.