ECI: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಶಾಕ್ – 334 ಪಕ್ಷಗಳು ಪಟ್ಟಿಯಿಂದ ಔಟ್ !!

Share the Article

ECI: ಭಾರತೀಯ ಚುನಾವಣಾ ಆಯೋಗವು (ECI) ಅತಿ ದೊಡ್ಡ ಅಭಿಯಾನಕ್ಕೆ ಮುಂದಾಗಿದ್ದು 334 ನೋಂದಾಯಿತ, ಆದರೆ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು (Political Party) ಪಟ್ಟಿಯಿಂದ ತೆಗೆದುಹಾಕಿದೆ.

ಹೌದು, ಈ ಬಗ್ಗೆ ಭಾರತೀಯ ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದ್ದು, 334 ರಾಜಕೀಯ ಪಕ್ಷಗಳು ನೋಂದಾಯಿತ ಮಾನ್ಯತೆಯ ಸ್ಥಾನಮಾನವನ್ನು ಉಳಿಸಿಕೊಳ್ಳಲು ಅಗತ್ಯವಾದ ಷರತ್ತುಗಳನ್ನು ಪೂರೈಸಲು ವಿಫಲವಾದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ಈ ಪಕ್ಷಗಳು ಕಳೆದ ಆರು ವರ್ಷಗಳಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಹಾಗೂ ಭೌತಿಕವಾಗಿ ಎಲ್ಲಿಯೂ ಕಚೇರಿಗಳನ್ನು ಹೊಂದಿಲ್ಲ. ಮಾನ್ಯತೆ ಪಡೆಯದ ಇಂತಹ ಇನ್ನೂ 2,520 ರಾಜಕೀಯ ಪಕ್ಷಗಳು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿವೆ ಎಂದು ಆಯೋಗ ತಿಳಿಸಿದೆ.

ಅಲ್ಲದೆ ಸದ್ಯ 6 ರಾಷ್ಟ್ರೀಯ ಪಕ್ಷಗಳು ಮತ್ತು 67 ಪ್ರಾದೇಶಿಕ ಪಕ್ಷಗಳು ದೇಶದಲ್ಲಿವೆ.

PM Modi: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ – ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿ!!

Comments are closed.