ದೇಶಾದ್ಯಂತ ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ಸುಪ್ರೀಂ ಕೋರ್ಟ್ ಸೂಚನೆ | ಹಾಗಾದ್ರೆ ಲಾಕ್ ಡೌನ್ ಪಕ್ಕಾನಾ ?!
ದೇಶಾದ್ಯಂತ ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ಸುಪ್ರೀಂ ಕೋರ್ಟ್ ಸರಕಾರಕ್ಕೆ ಸೂಚನೆಯನ್ನು ನೀಡಿದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಕೋವಿಡ್ ಕುರಿತ ಬಂದ ಒಂದು ಅರ್ಜಿ ವಿಚಾರಣೆ ವೇಳೆ ಸರಕಾರಕ್ಕೆ ಸೂಚನೆಯನ್ನು ನೀಡಿದೆ. ದೇಶದ ಜನರ ಹಿತದೃಷ್ಟಿಯಿಂದ ಲಾಕ್ ಡೌನ್ ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್ ತಿಳಿಸಿದೆ.
ಭಾರತೀಯ ವೈದ್ಯಕೀಯ ಮಂಡಳಿ ಕೂಡ ಸೋಂಕಿನ ವ್ಯಾಪಕ ಹರಡುವಿಕೆ ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಿಸಬೇಕೆಂದು ಆಗ್ರಹಿಸಿತ್ತು. ಆದರೆ ಎಲ್ಲ ಸರಕಾರಗಳು ಅದನ್ನು ನಿರ್ಲಕ್ಷಿಸಿದವು. ಇದೀಗ ಸೋಂಕು ಉಲ್ಭಣಗೊಂಡು ಬೇರೆನೂ ಮಾಡಲಾಗದ ಸಂದರ್ಭದಲ್ಲಿ ಒಂದೊಂದಾಗಿ ರಾಜ್ಯ ಸರಕಾರಗಳು ಲಾಕ್ ಡೌನ್ ಅನ್ನು ಘೋಷಿಸುತ್ತಿವೆ.