Supreme Court: ಬೀದಿ ನಾಯಿಗಳ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು !!

Supreme Court: ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದ್ದು, ಪ್ರಾಣಿ ಪ್ರಿಯರು ದೂರವಿರಿ, ಅಥವಾ ಬೀದಿನಾಯಿಗಳನ್ನು ಸ್ಥಳಾಂತರಿಸಿ ಎಂದು ಖಡಕ್ ಆದೇಶ ನೀಡಿದೆ.

ಹೌದು, ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ದೂರ ಸ್ಥಳಾಂತರಿಸಬೇಕು ಮತ್ತು ಈ ಪ್ರಕ್ರಿಯೆಯನ್ನು ತಡೆಯುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಎಚ್ಚರಿಕೆ ನೀಡಿದೆ.
ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ. ಎಂಸಿಡಿ ದತ್ತಾಂಶ ಮತ್ತು ಇತ್ತೀಚಿನ ಸಮೀಕ್ಷೆಗಳ ಪ್ರಕಾರ, ದೆಹಲಿಯೊಂದರಲ್ಲೇ ಸುಮಾರು 10 ಲಕ್ಷ ಬೀದಿ ನಾಯಿಗಳಿವೆ ಎಂದು ಅಂದಾಜಿಸಲಾಗಿದೆ. 2023 ರಲ್ಲಿ ಕೇವಲ 4.7 ಲಕ್ಷ ನಾಯಿಗಳಿಗೆ ಮಾತ್ರ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆಅಲ್ಲದೆ ನಾವು ಇದನ್ನು ನಮಗಾಗಿ ಮಾಡುತ್ತಿಲ್ಲ, ಇದು ಸಾರ್ವಜನಿಕ ಹಿತಾಸಕ್ತಿಗಾಗಿ. ಆದ್ದರಿಂದ, ಯಾವುದೇ ರೀತಿಯ ಭಾವನೆಗಳನ್ನು ಒಳಗೊಂಡಿರಬಾರದು. ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು” ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಹೇಳಿದ್ದಾರೆ. “ಎಲ್ಲಾ ವಸತಿ ಪ್ರದೇಶಗಳಿಂದ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಿ. ಸದ್ಯಕ್ಕೆ ನಿಯಮಗಳನ್ನು ಮರೆತುಬಿಡಿ” ಎಂದು ಅವರು ಅಮಿಕಸ್ ಕ್ಯೂರಿ ಗೌರವ್ ಅಗರ್‌ವಾಲಾ ಅವರಿಗೆ ತಿಳಿಸಿದ್ದಾರೆ. ಬೀದಿ ನಾಯಿಗಳ ಹಾವಳಿಯನ್ನು ನಿಭಾಯಿಸಲು ತೆಗೆದುಕೊಳ್ಳಬಹುದಾದ ಕ್ರಮಗಳನ್ನು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಬೀದಿ ನಾಯಿಗಳಿಗೆ ಬಿರಿಯಾನಿ ಕೊಡಬೇಕು ಎಂಬ ನಿರ್ಧಾರ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿತ್ತು. ಈ ಬೆಳವಣಿಗೆ ನಡುವೆ ಈಗ ದೆಹಲಿ ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
Comments are closed.