Education: ಮಕ್ಕಳ ಪ್ರವೇಶಾತಿ ವೇಳೆ ಪೋಷಕರಿಂದ ಒಪ್ಪಿಗೆ ಪತ್ರ ಪಡೆದ ಬಳಿಕವೇ ಮಕ್ಕಳಿಗೆ ಮೊಟ್ಟೆ ವಿತರಣೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Education: ಶಾಲೆಗಳಲ್ಲಿ ಮೊಟ್ಟೆ ವಿತರಣೆ ಬಗ್ಗೆ ಕೆಲವು ಕಡೆ ಆಕ್ಷೇಪಣೆ, ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಪ್ರವೇಶಾತಿ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ (Education) ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.

ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಮೊಟ್ಟೆಯನ್ನು ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂದು ಫೌಂಡೇಶನ್ ವರದಿ ನೀಡಿತ್ತು. ಪ್ರಮುಖವಾಗಿ ಮೊಟ್ಟೆ ತಿನ್ನದೇ ಇರಲು ವಾಡಿಕೆ/ವೈಯಕ್ತಿಕ ಆಚರಣೆ, ಕೆಲವು ಪೋಷಕರು ಮೊಟ್ಟೆ ಪಡೆಯಲು ಒಪ್ಪಿಗೆ ನೀಡದೇ ಇರುವುದು ಗೊತ್ತಾಗಿತ್ತು. ಈ ಎಲ್ಲ ಕಾರಣಗಳಿಂದಾಗಿ ಮಕ್ಕಳ ಪ್ರವೇಶಾತಿಯ ವೇಳೆಯೇ ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ಮೊಟ್ಟೆ ಸೇವಿಸುವವರಿಗೆ ಮೊಟ್ಟೆ, ಸೇವಿಸದವರಿಗೆ ಬಾಳೆ ಹಣ್ಣು ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಮೊಟ್ಟೆ, ಬಾಳೆ ಹಣ್ಣು ಖರೀದಿಗೆ ಶಾಲಾಭಿವೃದ್ಧಿ ಸಮಿತಿಗಳಿಗೆ ನೇರವಾಗಿ ಹಣ ನೀಡಲಾಗುತ್ತದೆ. ಒಂದು ವೇಳೆ ನೀಡಿದ ಹಣದಲ್ಲಿ ಉಳಿತಾಯವಾದರೆ ಆ ಮೊತ್ತವನ್ನು ಮಕ್ಕಳಿಗೆ ಬಳಸಲಾಗುವುದು ಎಂದು ಸಚಿವರು ತಿಳಿಸಿದರು.
Bengaluru : ಕೆಂಪು ಕಲ್ಲು ವಿಚಾರ – ವಿಧಾನಸಭೆಯಲ್ಲಿ ಸಿಡಿದೆದ್ದ ಕರಾವಳಿ ಶಾಸಕರು
Comments are closed.