ಇನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಸಲು ಇದ್ದ ಕೊನೆಯ ದಿನಾಂಕ ಮುಂದಕ್ಕೆ
ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಭಾರತದ ಇನ್ಕಮ್ ಟ್ಯಾಕ್ಸ್ ದಾರರಿಗೆ ಕೇಂದ್ರ ಸರಕಾರ ಶುಭ ಸುದ್ದಿ ನೀಡಿದೆ. ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ.
ಈ ಹಿಂದೆ ಇನ್ಕಮ್ ಟ್ಯಾಕ್ಸ್ ಸಲ್ಲಿಸಲು ಜುಲೈ 31 ಕಡೆಯ ದಿನವಾಗಿತ್ತು. ಇದೀಗ ದೇಶದಲ್ಲಿ ಕೊರೊನಾ ಎರಡನೇ ಅಲೆ ಇರುವುದರಿಂದ ಈ ದಿನವನ್ನು ಸೆಪ್ಟೆಂಬರ್ 30 ರವರೆಗೆ ಮುಂದೂಡಿಕೆ ಆಗಿದೆ. ಈ ಬಗ್ಗೆ ಸೆಂಟ್ರಲ್ ಡೈರೆಕ್ಟ್ ಟ್ಯಾಕ್ಸ್ ಬೋರ್ಡ್ ಆದೇಶ ನೀಡಿದೆ.
ಈ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೇಶಾದ್ಯಂತ ತೆರಿಗೆ ರಿಟರ್ನ್ ಸಲ್ಲಿಸಲು ವನ್ನು ಮುಂದುವರೆಸಬೇಕು ಎಂದು ಸಾಕಷ್ಟು ಕಡೆಗಳಿಂದ ಒತ್ತಾಯ ಕೇಳಿ ಬಂದಿತ್ತು. ಈಗ ತೆರಿಗೆ ಪಾವತಿದಾರರು ರಿಟರ್ನ್ ಸಲ್ಲಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ.
ಈಗಿರುವ ಪರಿಸ್ಥಿತಿಯನ್ನು ಅವಲೋಕಿಸಿ ಜತೆಗೆ ರಿಟರ್ನ್ ಮಾಡುವ ದಿನಾಂಕವನ್ನು ವಿಸ್ತರಿಸಬೇಕೆಂದು ಸಾಕಷ್ಟು ಒತ್ತಾಯ ಕೇಳಿ ಬಂದಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಬಿಡಿಟಿ ತಿಳಿಸಿದೆ.
ತೆರಿಗೆ ಪಾವತಿದಾರರು ರಿಟರ್ನ್ ಸಲ್ಲಿಸಲು ಸೆಪ್ಟೆಂಬರ್ 30 ರವರೆಗೆ ಅವಕಾಶ ನೀಡಲಾಗಿದೆ.