Congress: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

Congress: ಬೆಳಂಬೆಳಗ್ಗೆ ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ವೇಳೆ ಶಾಸಕರಾಗಲಿ ಅಥವಾ ಅವರ ಕುಟುಂಬದವರಾಗಲಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಕೆಲಸದವನನ್ನು ವಿಚಾರಣೆ ನಡೆಸುತಿದ್ದು, ಶಾಸಕರನ್ನು ಕರೆಸಲಾಗಿದೆ.
Comments are closed.