ಮಂಗಳೂರು | ಅಕ್ರಮವಾಗಿ ಸಾಗಿಸುತ್ತಿದ್ದ 200 ಕೆ.ಜಿ ಗಾಂಜಾ ಸಹಿತ ನಾಲ್ವರ ಬಂಧನ

ಮೀನು ಸಾಗಾಟದ ಕಂಟೇನರ್ ಲಾರಿ ಹಾಗೂ ಐಷಾರಾಮಿ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ 200 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಲಾಕ್ ಡೌನ್ ಸಂದರ್ಭವನ್ನು ಬಳಸಿ ಭಾರೀ ಪ್ರಮಾಣದಲ್ಲಿ ಗಾಂಜಾವನ್ನು ಕೇರಳಕ್ಕೆ ಸಾಗಿಸುತ್ತಿದ್ದಾಗ, ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಹಾಗೂ ಸುಮಾರು 200 ಕೆ.ಜಿ ಗಾಂಜಾ ವಶವನ್ನು ವಶಕ್ಕೆ ಪಡೆದಿದ್ದಾರೆ.

ಕೇರಳದ ಕಾಸರಗೋಡು ನಿವಾಸಿಗಳಾದ ಮಹಮ್ಮದ್ ಫಾರೂಕ್, ಮೊಯಿದ್ದಿನ್ ನವಾಸ್, ಕುಶಾಲನಗರ ನಿವಾಸಿ ಸೈಯದ್ ಮಹಮ್ಮದ್ ಹಾಗೂ ಮಂಗಳೂರಿನ ಮುಡಿಪು ನಿವಾಸಿ ಮಹಮ್ಮದ್ ಅನ್ಸಾರ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.