ಲಾಕ್‌ಡೌನ್ ಅವಧಿಯಲ್ಲಿ ಕ್ರಿಕೆಟ್,ವಾಲಿಬಾಲ್ ಆಡುವವರ ವಿರುದ್ಧ ಪ್ರಕರಣ : ಪೊಲೀಸ್ ಆಯುಕ್ತರ ಎಚ್ಚರಿಕೆ

 

ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಸರಕಾರ ಹೊರಡಿಸಿರುವ ಲಾಕ್‌ಡೌನ್ ಅವಧಿಯಲ್ಲಿ ಮೈದಾನಗಳಲ್ಲಿ ಕ್ರಿಕೆಟ್, ವಾಲಿಬಾಲ್ ಆಡಿದರೆ ಅವರ ವಿರುದ್ದ ಕಠಿಣ ಕ್ರಮಕೈಗೊಳ್ಳುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಮೈದಾನಗಳಲ್ಲಿ ಕ್ರಿಕೆಟ್, ವಾಲಿಬಾಲ್ ಆಡುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದೆ.

ಈ ಕುರಿತು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಸಿಬ್ಬಂದಿಗೆ ನಿಗಾ ವಹಿಸಲು ಸೂಚಿಸಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಟಿಸಿ ಆಟವಾಡುವುದು ಕಂಡುಬಂದರೆ ಪ್ರಕರಣ ದಾಖಲಿಸಲಾಗುವುದು ಎಂದು ಕಮಿಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.

Leave A Reply

Your email address will not be published.