ಬಿಜೆಪಿ ಶಾಸಕ ಸಿಎಂ ಉದಾಸಿ ಅರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು : ಹಾಲಿ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ, ಮಾಜಿ ಸಚಿವ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಬಂದಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದಲೂ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ತುರ್ತು ಚಿಕಿತ್ಸಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸಿಎಂ ಉದಾಸಿ ಅವರು ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

Leave A Reply

Your email address will not be published.