ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ಯತ್ನ | ಆರೋಪಿ ಹಾರೀಸ್ ಪೊಲೀಸ್ ವಶಕ್ಕೆ

Share the Article

ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಮನೆಯೊಂದರಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಒಬ್ಬಂಟಿಯಾಗಿದ್ದ ವೇಳೆ ಅಕ್ರಮವಾಗಿ ಮನೆಯೊಳಗೆ ಪ್ರವೇಶಿದ ವ್ಯಕ್ತಿಯೊರ್ವ ದೌರ್ಜನ್ಯವೆಸಗಲು ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ಥೆ ಬಾಲಕಿ ನೀಡಿದ ದೂರಿನಂತೆ ಪೋಸ್ಕೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಳ್ನಾಡು ಗ್ರಾಮದ ಹಾರೀಸ್ (26ವ.) ಎಂಬಾತೇ ಬಂಧಿತ ಆರೋಪಿ.

ಈತನು 14 ವರ್ಷ ಪ್ರಾಯದ ಬಾಲಕಿಯೊಬ್ಬಳೇ ಮನೆಯಲ್ಲಿದ್ದುದನ್ನು ಗಮನಿಸಿ ತೆಂಗಿನ ಎಣ್ಣೆ ಕೇಳುವ ನೆಪದಲ್ಲಿ ಮನೆಗೆ ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲದ್ದನ್ನು ಕಂಡ ಆತ ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ. ಬಾಯಿಗೆ ಕೈಯಿಟ್ಟು ಬೊಬ್ಬೆ ಹಾಕದಂತೆ ಒತ್ತಡ ಹೇರಿದ್ದಾನೆ. ಆತನಿಂದ ತಪ್ಪಿಸಿಕೊಂಡ ಬಾಲಕಿ ಕಿರುಚಿ ಮನೆಯಿಂದ ಹೊರಗೆ ಓಡುತ್ತಿರುವುದನ್ನು ಕಂಡ ನೆರೆ ಮನೆಯವರು ಬಾಲಕಿಯ ಮನೆಗೆ ಬಂದಾಗ ಆರೋಪಿ ಸ್ಥಳದಿಂದ ಪರಾರಿಯಾಗಿರುವುದಾಗಿ ದೂರಿನಲ್ಲಿ ವಿವರಿಸಲಾಗಿತ್ತು.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ನೊಂದ ಯುವತಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಕೊಳ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡಿದ್ದರು.

ಬಂಟ್ವಾಳ ಡಿ.ವೈ.ಎಸ್.ಪಿ. ವೆಲೈಂಟೈನ್ ಡಿಸೋಜಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Leave A Reply

Your email address will not be published.