Madhu Bangarappa: ಸದ್ಯದಲ್ಲೇ 16,000 ಶಿಕ್ಷಕರ ನೇಮಕ – ಮಧು ಬಂಗಾರಪ್ಪ ಘೋಷಣೆ

Madhu Bangarappa : ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಸರ್ಕಾರ ಕ್ರಮವಹಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಮಾಡಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪೋಷಕರಿಂದ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ 171 ಶಾಲೆಗಳಲ್ಲಿ ಕನ್ನಡದ ಜೊತೆ ಇಂಗ್ಲಿಷ್ ಮಾಧ್ಯಮವನ್ನು ತೆರೆಯಲು ಸರ್ಕಾರದಿಂದ ಅನುಮತಿ ನೀಡಲಾಗಿದೆ ಎಂದು ಹೇಳಿದರು.
2025-26ನೇ ಸಾಲಿನಲ್ಲಿ ಪ್ರಥಮ ಬಾರಿಗೆ ರಾಜ್ಯದ 5000 ಸರ್ಕಾರಿ ಶಾಲೆಗಳಲ್ಲಿ ಎಲ್‌ಜಿ & ಯುಕೆಜಿ ತರಗತಿಗಳು, 4000 ಸರ್ಕಾರಿ ಶಾಲೆಗಳಲ್ಲಿ ದ್ವಿ-ಭಾಷಾ ತರಗತಿಗಳನ್ನು ಹಾಗೂ ರಾಜ್ಯದಲ್ಲಿ 500 ಶಾಲೆಗಳನ್ನು ಕೆ.ಪಿ.ಎಸ್ ಶಾಲೆಗಳಾಗಿ ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆ.
ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ 25000 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತವಾಗಿ ಎನ್‌ಇಇಟಿ/ಜೆಇಇ/ಸಿಇಟಿ ತರಬೇತಿ ನೀಡಲಾಗುತ್ತಿದೆ. ಸದರಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು 2024-25ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯು ಐಐಟಿ ಖರಗುರ ಗೆ ಪ್ರವೇಶಾತಿ ಪಡೆದಿರುವುದು ಶಿಕ್ಷಣ ಸಚಿವನಾಗಿ ನನಗೆ ಹೆಮ್ಮಯ ವಿಷಯವಾಗಿದೆ ಎಂದರು.
Comments are closed.