ಪುತ್ತೂರು : ವಿವಾಹ ನಿಶ್ಚಿತಾರ್ಥವಾಗಿದ್ದ ಗೌರವ ಶಿಕ್ಷಕಿ ನೇಣಿಗೆ ಶರಣು
ಪುತ್ತೂರು: ವಿವಾಹ ನಿಶ್ಚಿತಾರ್ಥ ವಾಗಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ಕುಳದಪಾರೆಯಲ್ಲಿ ನಡೆದಿದೆ.
ನಿದಿಯಡ್ಕ ನಿವಾಸಿ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಪ್ರಿಯಾಳೆ (25) ಮೃತ ಯುವತಿ.
ತನ್ನ ಮನೆಯಲ್ಲಿ ನಿನ್ನೆ ಯಾರು ಇಲ್ಲದ ಸಂಧರ್ಭ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪುತ್ತೂರು ತಾಲೂಕಿನ ಬಡಗನ್ನೂರು ಸರ್ಕಾರಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿಯೂ ಕಾರ್ಯ ನಿರ್ವಹಿಸಿದ್ದ ಅವರು ನಂತರ ಈಶ್ವರಮಂಗಲದ ಜೆರಾಕ್ಸ್ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಈ ಕುರಿತು ಅದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.