Chamarajanagar : ಅಂಬೇಡ್ಕರ್ ಭವನ ಕಟ್ಟಲು ಸರ್ಕಾರದಿಂದ ಭೂಮಿ ವಶ – ಮನನೊಂದು ಮಹಿಳೆ ಆತ್ಮಹತ್ಯೆ ದು ಮಹಿಳೆ ಆತ್ಮಹತ್ಯೆ

Share the Article

Chamarajanagar : ಅಂಬೇಡ್ಕರ್ ಭವನ ಕಟ್ಟಲು ಜಮೀನು ವಶಪಡಿಸಿಕೊಂಡಿದ್ದಕ್ಕೆ (Land Acquisition) ಮನನೊಂದು ಮಹಿಳೆಯೊಬ್ಬರು ತಮ್ಮ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ (Chamarajanagar Crime) ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಳತೂರು ಗ್ರಾಮದಲ್ಲಿ ನಡೆದಿದೆ.

52 ವರ್ಷದ ರಾಜಮ್ಮ ಮೃತ ಮಹಿಳೆ. ರಾಜಮ್ಮರಿಗೆ ಪಿತ್ರಾರ್ಜಿತವಾಗಿ 90 ಸೆಂಟ್ ಭೂಮಿ ಬಂದಿತ್ತು. ಇದ್ದ ಚೂರುಪಾರು ಭೂಮಿಯಲ್ಲಿ ಕುಟುಂಬ ವ್ಯವಸಾಯ ಮಾಡಿ ಜೀವನ ನಡೆಸುತ್ತಿದರು. ಕಳೆದವಾರ ಇದ್ದಕ್ಕಿದ್ದ ಹಾಗೆ ಬಂದ ಕಂದಾಯ ಇಲಾಖೆಯ ಅಧಿಕಾರಿಗಳು ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ 20 ಸೆಂಟ್ ಭೂಮಿ ವಶಪಡಿಸಿಕೊಂಡಿರುವುದಾಗಿ ಹೇಳಿದ್ದರು. ಈ ಘಟನೆಯಿಂದ ಮನನೊಂದ ರಾಜಮ್ಮ ಇಂದು ಮುಂಜಾನೆ ತಮ್ಮ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ.

ಘಟನೆಯ ಸುದ್ದಿ ತಿಳಿದು ಗ್ರಾಮಸ್ಥರು ಮತ್ತು ಸಂಬಂಧಿಕರು ಸ್ಥಳಕ್ಕಾಗಮಿಸಿ ಕಂದಾಯ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನಲ್ಲೇ ರಾಜಮ್ಮರ ಶವವನ್ನು ಇಟ್ಟು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Chamarajanagar : ಅಂಬೇಡ್ಕರ್ ಭವನ ಕಟ್ಟಲು ಸರ್ಕಾರದಿಂದ ಭೂಮಿ ವಶ – ಮನನೊಂChamarajanagar : ಅಂಬೇಡ್ಕರ್ ಭವನ ಕಟ್ಟಲು ಜಮೀನು ವಶಪಡಿಸಿಕೊಂಡಿದ್ದಕ್ಕೆ (Land Acquisition) ಮನನೊಂದು ಮಹಿಳೆಯೊಬ್ಬರು ತಮ್ಮ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ (Chamarajanagar Crime) ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಳತೂರು ಗ್ರಾಮದಲ್ಲಿ ನಡೆದಿದೆ.

52 ವರ್ಷದ ರಾಜಮ್ಮ ಮೃತ ಮಹಿಳೆ. ರಾಜಮ್ಮರಿಗೆ ಪಿತ್ರಾರ್ಜಿತವಾಗಿ 90 ಸೆಂಟ್ ಭೂಮಿ ಬಂದಿತ್ತು. ಇದ್ದ ಚೂರುಪಾರು ಭೂಮಿಯಲ್ಲಿ ಕುಟುಂಬ ವ್ಯವಸಾಯ ಮಾಡಿ ಜೀವನ ನಡೆಸುತ್ತಿದರು. ಕಳೆದವಾರ ಇದ್ದಕ್ಕಿದ್ದ ಹಾಗೆ ಬಂದ ಕಂದಾಯ ಇಲಾಖೆಯ ಅಧಿಕಾರಿಗಳು ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ 20 ಸೆಂಟ್ ಭೂಮಿ ವಶಪಡಿಸಿಕೊಂಡಿರುವುದಾಗಿ ಹೇಳಿದ್ದರು. ಈ ಘಟನೆಯಿಂದ ಮನನೊಂದ ರಾಜಮ್ಮ ಇಂದು ಮುಂಜಾನೆ ತಮ್ಮ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ.

ಘಟನೆಯ ಸುದ್ದಿ ತಿಳಿದು ಗ್ರಾಮಸ್ಥರು ಮತ್ತು ಸಂಬಂಧಿಕರು ಸ್ಥಳಕ್ಕಾಗಮಿಸಿ ಕಂದಾಯ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನಲ್ಲೇ ರಾಜಮ್ಮರ ಶವವನ್ನು ಇಟ್ಟು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ajay Rao: ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಗೆ ಅರ್ಜಿ !!

Comments are closed.