Weather Report: ಕರಾವಳಿ, ಮಲೆನಾಡಿನಲ್ಲಿ ಮಳೆ ಹೇಗಿದೆ? – ಮಹಾರಾಷ್ಟ್ರ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

Weather Report: ಕಾಸರಗೋಡು ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.

ಈಗಿನಂತೆ ಆಗಸ್ಟ್ 20ರ ತನಕ ಮಳೆಯ ಮುನ್ಸೂಚೆನೆ ಇದೆ. ನಂತರ ಕಡಿಮೆಯಾಗಿ ಮೋಡ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 25ರಿಂದ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 18 ಹಾಗೂ 19ರಂದು ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. 21ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಉಳಿದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಚಾಮರಾಜನಗರ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸ್ವಲ್ಪ ಹೆಚ್ಚಿರಬಹುದು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಮುಂಬೈ ಕಡಲ ತೀರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಆಗಸ್ಟ್ 20ರ ತನಕ ಮುಂಬೈ ಸೇರಿದಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
Comments are closed.