

Darshan : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಅಡಿ ದರ್ಶನ್ ಮತ್ತು ಅವರ ಗ್ಯಾಂಗ್ ಜಾಮೀನು ರದ್ದಾಗಿರುವ ಕಾರಣ ಇದೀಗ ಜೈಲು ಪಾಲಾಗಿದ್ದಾರೆ. ಸದ್ಯ ದರ್ಶನ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶ ಒಂದನ್ನು ಕಳಿಸಿದ್ದಾರೆ.
ಹೌದು, ಗುರುವಾರ ಪರಪ್ಪನ ಅಗ್ರಹಾರವನ್ನು ಸೇರಿರುವ ನಟ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಜೈಲಿನಿಂದ ಸಂದೇಶ ಕಳುಹಿಸಿದ್ದು, ಅವರ ಸಂದೇಶವನ್ನು ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮಾಡಿದ್ದಾರೆ.
ದರ್ಶನ್ ಕಳುಹಿಸಿದ ಸಂದೇಶ ಏನು?
“ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ ” ದಿ ಡೆವಿಲ್ ” ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ.
“ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.” ಎಂದು ತಿಳಿಸಿದ್ದಾರೆ.
https://www.instagram.com/p/DNaqNjYPEhO/?igsh=MXdra3o1ZmU1eXpkag==













