ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ಕೋವಿಡ್ಗೆ ಬಲಿ | ದಲಿತ ಚಳವಳಿಗೆ ಹೊಸ ವೇಗ, ಹೊಸ ಸ್ಪರ್ಶ ಕೊಟ್ಟವರು ಡಾ.ಸಿದ್ದಲಿಂಗಯ್ಯ
ಹಿರಿಯ ಕವಿ, ದಲಿತ ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಿದ್ದಲಿಂಗಯ್ಯ ಅವರನ್ನು ಇತ್ತೀಚೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ನಿಧನರಾಗಿದ್ದಾರೆ.
ದಲಿತ ಚಳವಳಿಗೆ ಹೊಸ ವೇಗ, ಹೊಸ ಸ್ಪರ್ಶ ಕೊಟ್ಟವರು ಡಾ.ಸಿದ್ದಲಿಂಗಯ್ಯ. ಸಿದ್ದಲಿಂಗಯ್ಯ ಬರೆದ ಕ್ರಾಂತಿಗೀತೆ ‘ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯ ಕೊಡಿ’ ರಾಜ್ಯವ್ಯಾಪಿ ಜನಪ್ರಿಯವಾಗಿತ್ತು. ದಲಿತ ಸಂವೇದನೆಗಳನ್ನು ಸಶಕ್ತವಾಗಿ, ಆಕ್ರೋಶವನ್ನು ಅಕ್ಷರಗಳಾಗಿ ಸಾರಿ ಹೇಳಿದ ಗೀತೆಯಿದು.
ಕ್ರಾಂತಿಗೀತೆ, ನೊಂದವರ ಪಾಡುಗಳನ್ನೇ ಹಾಡಾಗಿಸುತ್ತಿದ್ದ ಈ ಕವಿಯು ಶೃಂಗಾರ ಗೀತೆಗಳನ್ನು ಬರೆಯಬಲ್ಲರು ಎಂದು ನಿರೂಪಿಸಿದ್ದು ಜನಪ್ರಿಯ ಗೀತೆ ‘ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡಬೇಡ ಗೆಳತಿ’.ಕರ್ನಾಟಕದ ದಲಿತ ಚಳವಳಿಗೆ ಹೋಗ, ಸಂಚಲನ ನೀಡಿದ್ದ ಕ್ರಾಂತಿಗೀತೆ ಕ್ರಾಂತಿ ಗೀತೆ ‘ದಲಿತರು ಬಂದರು ದಾರಿ ಬಿಡಿ’.
ಡಾ.ಸಿದ್ದಲಿಂಗಯ್ಯ ಅವರ ಹೆಸರನ್ನು ಉಲ್ಲೇಖಿಸದೇ ಬಂಡಾಯ ಸಾಹಿತ್ಯದ ಇತಿಹಾಸ ಬರೆಯಲು ಸಾಧ್ಯವಿಲ್ಲ ಎಂಬಂತೆ ಅವರು ಹೆಸರುವಾಸಿಯಾಗಿದ್ದರು. ಪಂಪ, ನಾಡೋಜ ಪ್ರಶಸ್ತಿಗಳಿಗೂ ಭಾಜನರಾಗಿದ್ದ ಅವರು, ದಲಿತ, ಬಂಡಾಯವೆಂದರೆ ಹೊಡಿ- ಬಡಿ ಎಂಬುದಲ್ಲ ಎಂದು ವ್ಯಾಖ್ಯಾನಿಸಿದ್ದರು. ಕದ ದಲಿತ ಚಳವಳಿಗೆ ಹೋಗ, ಸಂಚಲನ ನೀಡಿದ್ದ ಕ್ರಾಂತಿಗೀತೆ ಕ್ರಾಂತಿ ಗೀತೆ ‘ದಲಿತರು ಬಂದರು ದಾರಿ ಬಿಡಿ’.
ದಲಿತರು ಬರುವರು ದಾರಿಬಿಡಿ, ದಲಿತರ ಕೈಗೆ ರಾಜ್ಯಕೊಡಿ ಎಂಬ ಅವರ ಕ್ರಾಂತಿಗೀತೆ ಈಗಲೂ ದಲಿತ ಚಳವಳಿಗಳಲ್ಲಿ ಕೇಳಿಬರುವಂತಹದ್ದು. ಹೊಲೆ ಮಾದಿಗರ ಹಾಡು, ಸಾವಿರಾರು ನದಿಗಳು, ಮೆರವಣಿಗೆ, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರೆ ಕವಿತೆಗಳು ಅವರ ಪ್ರಮುಖ ಕವಿತಾ ಸಂಕಲನಗಳು. ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1 ಮತ್ತು ಭಾಗ 2 ಅವರು ವಿಧಾನಪರಿಷತ್ ಸದಸ್ಯರಾಗಿ ಕರ್ತವ್ಯನಿರ್ವಹಿಸಿದ ಅನುಭವಗಳ ನೈಜ ಅನುಭವ ಕಥನ. ಅವರ ಆತ್ಮಕಥೆ ಊರು ಕೇರಿ ಭಾಗ 1 ಮತ್ತು ಭಾಗ 2ನ್ನು ಕನ್ನಡ ಸಾಹಿತ್ಯ ಎಂದಿಗೂ ಮರೆಯಲಾರದು.