Karnataka: ಭಾರಿ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್!

Karnataka: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯವರೆಗೂ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡು ಮತ್ತು ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಆಗಸ್ಟ್ 17ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಎಂದು ತಿಳಿಸಿದೆ.
ಆಗಸ್ಟ್ 18 ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯ ನಿರೀಕ್ಷೆಯಿದ್ದು, ರೆಡ್ ಅಲರ್ಟ್ ಘೋಷಿಸಿದ್ದಾರೆ.
ದrಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯೆಂದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಗಸ್ಟ್ 19ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ರೆಡ್ ಅಲರ್ಟ್ ಘೋಷಿಸಿದ್ದಾರೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.
ಆಗಸ್ಟ್ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.
Comments are closed.