School Holiday: ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

Udupi: ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಕಾರಣದಿಂದ ಆ.18 (ಇಂದು) (ಸೋಮವಾರ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲೂ ನಿರಂತರ ಮಳೆ ಸುರಿಯುತ್ತಿರುವ ಕಾರಣ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯ ಕಾರಣದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಮುಂದಿನ ಶನಿವಾರ ಆಗಸ್ಟ್ 23 ರಂದು ಪೂರ್ಣ ದಿನ ಶಾಲೆ ನಡೆಸಿ ಸರಿದೂಗಿಸಿಕೊಳ್ಳಲು ಆದೇಶದಲ್ಲಿ ಸೂಚನೆ ನೀಡಲಾಗಿದೆ.
Comments are closed.