AI technology: ಅಫಘಾತದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ AI !

Share the Article

AI technology: ಆಗಸ್ಟ್ 9 ರಂದು ನಾಗ್ಪುರ–ಜಬಲ್‌‍ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹ ಸಾಗಿಸಲು ಯಾರಿಂದಲೂ ಸಹಾಯ ಸಿಗದ ಕಾರಣ, ದೇಹವನ್ನು ಬೈಕ್‌ಗೆ ಕಟ್ಟಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಕಳೆದ ವಾರ ನಡೆದಿತ್ತು. ಈ ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎಐ (ಕೃತಕ ಬುದ್ಧಿಮತ್ತೆ) ಬಳಸಿಕೊಂಡು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ನಡೆದಿದ್ದು, ಬೈಕ್‌ಗೆ ದೇಹವನ್ನು ಕಟ್ಟಿ ಸಾಗಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ನಾಗ್ಪುರ ಪೊಲೀಸರು ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಆರಂಭದಲ್ಲಿ ಪೊಲೀಸರಿಗೆ ಟ್ರಕ್ ಚಾಲಕನ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಆದರೆ ಅಪರಾಧ ತಡೆಗಟ್ಟುವಿಕೆ ಹಾಗೂ ಪೊಲೀಸರ ತನಿಖೆಗೆ ಸಹಾಯ ಮಾಡುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ AI -MARVEL (ಮಹಾರಾಷ್ಟ್ರ ಅಡ್ವಾನ್ಸ್ಡ್ ರಿಸರ್ಚ್ ಅಂಡ್ ವಿಜಿಲೆನ್ಸ್ ಫಾರ್ ಎನ್ಹ್ಯಾನ್ಸ್ಡ್ ಲಾ ಎನ್‌ಫೋರ್ಸ್‌ಮೆಂಟ್) ಬಳಸಿಕೊಂಡು ವಿವಿಧ ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಚಾಲಕನನ್ನು ಉತ್ತರ ಪ್ರದೇಶದ ಫರೂಕಾಬಾದ್ ನಿವಾಸಿ ಸತ್ಯಪಾಲ್ ರಾಜೇಂದ್ರ (28) ಎಂದು ಗುರುತಿಸಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Bantwala: ಬಂಟ್ವಾಳ: ವ್ಯಕ್ತಿಯೊಬ್ಬರ ಜೇಬಿನಲ್ಲಿದ್ದ 50 ಸಾವಿರದ ಎರಡು ಕಟ್ಟು ಹಣ ಕಳವು! ದೂರು ದಾಖಲು!

Comments are closed.