ತನ್ನ ಇಬ್ಬರು ಅಪ್ರಾಪ್ತ ವಯಸ್ಕ ಹೆಣ್ಣುಮಕ್ಕಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ | ಆರೋಪಿಯ ಬಂಧನ | ಇಂತಹ ಅಪ್ಪ ಯಾರಿಗೂ ಇರಬಾರದು

ತನ್ನಿಬ್ಬರು ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳ ಮೇಲೆ 3 ವರ್ಷಗಳಿಂದ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಪಾಪಿ ತಂದೆಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

 

ಬಂಧಿತ ಆರೋಪಿ ಸುರತ್ಕಲ್ ನಿವಾಸಿಯಾಗಿದ್ದಾನೆ. ಈತ ತನ್ನ, ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳಿಗೆ ಸದಾ ದೈಹಿಕವಾಗಿ ಹಲ್ಲೆ ಮಾಡಿ ಕಿರುಕುಳ ನೀಡುತ್ತಿದ್ದ. ಅಲ್ಲದೆ, ಈತ ಸಮಯ ಸಾಧಿಸಿ ಈ ಮಕ್ಕಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ.

ಕೆಲ ದಿನಗಳ ಹಿಂದೆ ಆರೋಪಿ ತನ್ನ ಪತ್ನಿ ಮತ್ತು ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಪತ್ನಿ ಮತ್ತು ಮಕ್ಕಳು ತವರು ಮನೆಗೆ ತೆರಳಿದ್ದರು.

ಅಲ್ಲಿ, ಸಂತ್ರಸ್ತ ಹೆಣ್ಣು ಮಕ್ಕಳು ತಮ್ಮ ಮಾವನ ಬಳಿ ಈ ವಿಚಾರವನ್ನು ಹೇಳಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಮಾವನ ಜೊತೆ ತೆರಳಿದ್ದ ಹೆಣ್ಣು ಮಕ್ಕಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರಂತೆ, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಂಧಿಸಲಾಗಿದ್ದು, ಆತನ ಪೈಶಾಚಿಕ ಕೃತ್ಯಕ್ಕಾಗಿ ಆತ ವಿರುದ್ಧ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

Leave A Reply

Your email address will not be published.