Shakti Scheme: ಕರ್ನಾಟಕ ಶಕ್ತಿ ಯೋಜನೆ ವಿಶ್ವ ದಾಖಲೆಗೆ ಸೇರ್ಪಡೆ!

Shakti Scheme: ಮಹಿಳಾ ಸಬಲೀಕರಣದ ಯೋಜನೆಯಾದ ಶಕ್ತಿ ಯೋಜನೆಯು ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49 ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ ಪಡೆದಿದೆ.

ಈ ಎರಡು ವರ್ಷಗಳ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 5,800 ಹೊಸ ಬಸ್ಗಳ ಸೇರ್ಪಡೆ, 10,000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2,000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ.
Comments are closed.