Heavy Rain: ಭಾರೀ ಮಳೆ ಹಿನ್ನೆಲೆ – ನಾಳೆ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Heavy Rain: ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿದೆ. ಈ ಹಿನ್ನೆಲೆ ನಾಳೆ (ಆಗಸ್ಟ್ 19 ರಂದು) ಅಂಗನವಾಡಿ, ಪ್ರಾಥಮಿಕ

ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
ಕಳೆದ 4-5 ದಿನಗಳಿಂದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಥವಾಗಿ ಮಾಳೆಯಾಗುತ್ತಿದ್ದು, ಇಂದು ಸುಮಾರು ಆರು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಮಳೆ ಜೋರಾದ ಹಿನ್ನೆಲೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ವಾಯುಭಾರತ ಕುಸಿತ ಹಿನ್ನೆಲೆ ಗಾಳಿಯು ಜೋರಾಗಿ ಬೀಸುತ್ತಿದ್ದು, ಮುಂಜಾಗೃತ ಕ್ರಮವಾಗಿ ಮಕ್ಕಳ ಹಿತ ದೃಷ್ಟಿಯಿಂದ ಅಂಗನವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Comments are closed.