ಖಾಸಗಿ ಆಸ್ಪತ್ರೆಗಳಲ್ಲಿ ಜನರ ಸುಲಿಗೆ ಹೇಳಿಕೆ ನೀಡಿದ ಹೆಚ್.ಡಿ ರೇವಣ್ಣ ವಿರುದ್ಧ ಪುತ್ತೂರು ಐಎಮ್ ಎ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಅವರಿಂದ ಪೊಲೀಸ್ ಠಾಣೆಗೆ ದೂರು

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ.

 

ಹಾಸನ‌ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಈ ಮುನ್ನ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್​ ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಖಾಸಗಿ ನರ್ಸಿಂಗ್ ಹೋಮ್​ಗಳು ಕೊವಿಡ್​ನ ಸಂಕಷ್ಟದ ಕಾಲದಲ್ಲಿ ಜನರ ಸುಲಿಗೆ ಮಾಡುತ್ತಿವೆ ಎಂದು ಕೆಲವು ದಿನಗಳ ಮುನ್ನವಷ್ಟೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದರು. ಖಾಸಗಿ ನರ್ಸಿಂಗ್ ಹೋಮ್​ಗಳು ಸುಲಿಗೆ ನಡೆಸುವುದನ್ನು ನಿಲ್ಲಿಸದಿದ್ದರೆ ಜನರನ್ನು ಕಳಿಸಿ ಹೊಡೆಸುತ್ತೇವೆ ಎಂದು ಸಹ ಹೇಳಿದ್ದ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಈ ಬೆನ್ನಲ್ಲೇ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್​ ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Leave A Reply

Your email address will not be published.