ನಾಳೆಯಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನ ಲಸಿಕೆ
ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಜೂನ್.21ರ ಸೋಮವಾರದಿಂದ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಮೂಲಕ ರಾಜ್ಯದಲ್ಲಿ 5 ರಿಂದ 7 ಲಕ್ಷ ಜನರಿಗೆ ಲಸಿಕೆ ಗುರಿಯನ್ನು ಹೊಂದಿರುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂನ್.21ರ ಸೋಮವಾರದಿಂದ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಮೇಳ ನಡೆಸಲಾಗುತ್ತಿದೆ. ಇದರ ಮಧ್ಯೆಯೂ 2ನೇ ಡೋಸ್ ಲಸಿಕೆ ಪಡೆಯೋರಿಗೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಕೊರೋನಾದಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದು ಮುಖ್ಯ. ಆರಂಭದಲ್ಲಿ ಆರೋಗ್ಯ ಕ್ಷೇತ್ರ, ಬಳಿಕ ವಿವಿಧ ಇಲಾಖೆಗಳ ಕೊರೋನಾ ವಾರಿಯರ್ಸ್, 60 ವರ್ಷ ಮೇಲ್ಪಟ್ಟವರಿಗೆ, ಬಳಿಕ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಯಿತು. ಬಳಿಕ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರ ಘೋಷಿಸಿತು. ಆದರೆ ಲಸಿಕೆ ಕೊರತೆಯಿಂದ ಇದನ್ನು ತಡೆಹಿಡಿದು ಆದ್ಯತಾ ಗುಂಪುಗೆ ಮಾತ್ರ ನೀಡಲಾಗುತ್ತಿದೆ. ಆದರೆ ನಾಳೆಯಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ದೊರೆಯಲಿದೆ.