Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ: ವಾಯುಭಾರ ಕುಸಿತ, ಆ.20ರಂದು ಶಿಥಿಲಗೊಳ್ಳುವ ಸಾಧ್ಯತೆ

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ, ಬಿಸಿಲು ಹಾಗೂ ಬಿಟ್ಟು ಬಿಟ್ಟು ದಿನದಲ್ಲಿ ಸಣ್ಣ ಪ್ರಮಾಣದ 3, 4 ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 21ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಆಗಸ್ಟ್ 21ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ 20ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.
ಒಡಿಸ್ಸಾದಲ್ಲಿರುವುದು ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಕಳೆದ ಎರಡು ದಿನಗಳಿಂದ ಅರಬ್ಬಿ ಸಮುದ್ರದ ಗುಜರಾತ್, ಮಹಾರಾಷ್ಟ್ರ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗಿದ್ದು, ಆಗಸ್ಟ್ 20ರಂದು ಅದೂ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಲಿದೆ.
Manika Vishwakarma: ಮಣಿಕಾ ವಿಶ್ವಕರ್ಮ ಗೆ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟ!
Comments are closed.