ರಾಜ್ಯದ ಪ್ರಯಾಣಿಕ ವಾಹನ ಮಾಲೀಕರಿಗೆ ಗುಡ್ ನ್ಯೂಸ್ | ವಾಹನಗಳ ಮೇಲಿನ ತೆರಿಗೆಯಲ್ಲಿ ಶೇಕಡಾ 50 ರಷ್ಟು ವಿನಾಯಿತಿ

ಬೆಂಗಳೂರು : ಲಾಕ್ ಡೌನ್ ಸಂಕಷ್ಟದಲ್ಲಿದ್ದಂತಹ ರಾಜ್ಯದ ಪ್ರಯಾಣಿಕ ವಾಹನ ಮಾಲೀಕರಿಗೆ, ಸರ್ಕಾರ ಈಗಾಗಲೇ ತೆರಿಗೆ ಕಟ್ಟೋದಕ್ಕೆ ಅವಧಿಯನ್ನು ವಿಸ್ತರಣೆ ಮಾಡಿ ಸ್ವಲ್ಪ ರಿಲ್ಯಾಕ್ಸೇಶನ್ ನೀಡಿತ್ತು. ಇದೀಗ ಜೂನ್ 2021ರ ತಿಂಗಳಿನ ಮೋಟಾರು ವಾಹನಗಳ ಮೇಲಿನ ತೆರಿಗೆಯಲ್ಲಿ ಶೇ.50 ರಷ್ಟು ವಿನಾಯ್ತಿ ನೀಡಿ, ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.

 

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ , ಕೋವಿಡ್-19 ರ 2ನೇ ಅಲೆಯ ಹಿನ್ನೆಲೆಯಲ್ಲಿ, ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿದೆ.

ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ(Karnataka Motor Vehicle Tax 1957) 1957 ರ ಕಲಂ 16(1) ರನ್ವಯ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ತಿಂಗಳಿಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟು ವಿನಾಯಿತಿ ನೀಡಿ ಆದೇಶಿಸಿದ್ದಾರೆ.

ಈ ಮೂಲಕ ಪ್ರಯಾಣಿಕ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

Leave A Reply

Your email address will not be published.