School: ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ!

School: ಶಾಲೆಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಗಳನ್ನು ಜಾರಿಗೆ ತರುವ ಯೋಜನೆಯನ್ನು ಕೈಬಿಡಬೇಕು ಎಂದು ಶಿಕ್ಷಣ ತಜ್ಞರು, ಶಿಕ್ಷಕರ ಸಂಘಗಳು, ಪೋಷಕರ ಗುಂಪುಗಳು, ನಾಗರಿಕ ಸಮಾಜ ಸಂಘಟನೆಗಳ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2025-26 ನೇ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ, ಟ್ರ್ಯಾಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಲಾದ ಮೊಬೈಲ್ ಆಧಾರಿತ Al ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಘೋಷಿಸಿದೆ. ಆದರೆ ಇದು ದುರುಪಯೋಗವಾಗುವ ಸಾಧ್ಯತೆ ಇದ್ದು, ಆದ್ದರಿಂದ ಇದನ್ನು ಕೈ ಬಿಡುವಂತೆ ಒತ್ತಾಯಿಸಲಾಗಿದೆ.
Comments are closed.