ಆಗುಂಬೆ ಘಾಟಿ ರಸ್ತೆಯಲ್ಲಿ ಘನ ವಾಹನ ಸಂಚಾರ ನಿಷೇದ | ಸರಕು ಸಾಗಾಣಿಕೆ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿ

ಭಾರಿ ಮಳೆಯಾಗಿ ರಸ್ತೆ ಕುಸಿತವಾಗುವ ಆತಂಕ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169 ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ಎರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) & (5) ರನ್ವಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರ ವರೆಗೆ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಬದಲಿ ಮಾರ್ಗದ ವಿವರ

  • ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗ
  • ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು

Leave A Reply

Your email address will not be published.