ದಕ್ಷಿಣಕನ್ನಡ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಭಾರೀ ಮಳೆ, ಯಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ
ಕುಸಿತ ಆಗುತ್ತಿದೆ. ಇನ್ನೆರಡು ದಿನ ಅಂದರೆ, ಜೂ.28ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ವೇಗ ಪಡೆದುಕೊಳ್ಳಲಿದೆ.
ಈಗಾಗಲೇ ರಾಜ್ಯದ ವಿವಿಧಡೆ ಮಳೆಯಾಗುತ್ತಿದ್ದು, ಎರಡು ದಿನಗಳ ಬಳಿಕ ಮುಂಗಾರು ಬಿರುಸಾಗಲಿದೆ. ನಮ್ಮ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.
ಅಲ್ಲದೆ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.28 ರಿಂದ 30 ರವರೆಗೆ ಭಾರಿ ಮಳೆಯಾಗಲಿದೆ.
ಬಿರುಸಿನ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೋಲಾರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.