ತನ್ನ ಮೂವರು ಮಕ್ಕಳಿಗೆ ಐಸ್ ಕ್ರೀಂ ನಲ್ಲಿ ವಿಷ ಬೆರೆಸಿದ ಪಾಪಿ ತಂದೆ

ಮುಂಬೈ: ಕೌಟುಂಬಿಕ ಕಲಹದ ಕಾರಣ ತಂದೆಯೊಬ್ಬ ತನ್ನ ಮೂರು ಮಕ್ಕಳಿಗೆ ಐಸ್ ಕ್ರೀಂ ನಲ್ಲಿ ವಿಷ ಬೆರೆಸಿ ತಿನ್ನಿಸಿ ಹತ್ಯೆಗೆ ಯತ್ನಿಸಿದ್ದಾನೆ.

 

ಐಸ್ ಕ್ರೀಂ ತಿಂದ ಮಗುವೊಂದು ಸಾವನ್ನಪ್ಪಿದೆ. ಐದು ವರ್ಷ ಪ್ರಾಯದ ಮಗು ಪ್ರಾಣ ಕಳೆದುಕೊಂಡಿದೆ. ಇನ್ನಿಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ ಏಳು ಮತ್ತು ಎರಡು ವರ್ಷ ಪ್ರಾಯದ ಮಕ್ಕಳ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಮುಂಬೈನ ಮಂಕರ್ಡ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.