Weather Report: ರಾಜ್ಯದಲ್ಲಿ ಮುಂದುವರೆದ ಮುಂಗಾರು ಆರ್ಭಟ-ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

Share the Article

Weather Report: ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರೆದಿದ್ದು, ಬೇಡ ಅನ್ನುವಷ್ಟು ಮಳೆಯಾಗುತ್ತಿದೆ. ಅಲ್ಲಲ್ಲಿ ಕೆಲ ಅನಾಹುತಗಳು ಸಂಭವಿಸಿದ್ದು, ಕೃಷಿಯೂ ನಾಶವಾಗಿದೆಲೂ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಹಿನ್ನೆಲೆ ಇಂದು ಉತ್ತರಕನ್ನಡ ಜಿಲ್ಲೆಗಳ ತಾಲೂಕುಗಳ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದ ಹಲವು ಭಾಗಗಳಲ್ಲಿ ಆ. 24ರವರೆಗೂ ಮುಂದಿನ 5-6 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇವತ್ತು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಯಾ ಜಿಲ್ಲೆಗಳ ಡಿಸಿಗಳು ನಿರ್ಧಾರ ಕೈಗೊಂಡಿದ್ದಾರೆ.

ಬೆಂಗಳೂರಲ್ಲೂ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತವರಣ ಮುಂದುವರೆಯಲಿದೆ. ಮಧ್ಯಾಹ್ನದ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಗಾಳಿ ಮಳೆ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹಾಗೆಯೇ, ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ರಾಮನಗರ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Road Rules: ಕೇಂದ್ರ ಸರ್ಕಾರದಿಂದ ಹೊರ‌ಬಿತ್ತು ಹೊಸ ಆದೇಶ – ಎಲ್ಲಾ ಸರ್ಕಾರಿ ಸಾರಿಗೆ ಸಂಸ್ಥೆಗಳಿಗೆ ಅನ್ವಯ – ಏನದು?

Comments are closed.