Belthangady : ಉಜಿರೆಯಲ್ಲಿ ಗಲಾಟೆ ಪ್ರಕರಣ – ವಿಚಾರಣೆಗಾಗಿ ಬೆಳ್ತಂಗಡಿ ಠಾಣೆಗೆ ಬಂದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್

Share the Article

Belthangady : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ಸ್ ಮೇಲಿನ ಹಲ್ಲೆ ಖಂಡಿಸಿ ಬೆನಕ ಆಸ್ಪತ್ರೆ ಬಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡ್ ಹಾಗೂ ಗಿರೀಶ್ ಮಟ್ಟೆಣ್ಣವರ್ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 76/77/79/2025 ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಪ್ರಕರಣದಲ್ಲಿ 16 ಮಂದಿ ಆರೋಪಿಗಳಿಗೆ ಆ.20 ರಂದು 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿತ್ತು. ನೋಟಿಸ್ ಬೆನ್ನಲ್ಲೇ ಆ.20 ರ ಬುಧವಾರ ಸಂಜೆ 5 ಗಂಟೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಅಂದಹಾಗೆ ಆಸ್ಪತ್ರೆ ಬಳಿ ಅಕ್ರಮವಾಗಿ ಕೂಟ ಸೇರಿಸಿ ಗಲಾಟೆ ಮಾಡಿದ ಪ್ರಕರಣ ಸಂಬಂಧ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಸೇರಿ 50ಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಘಟನೆ ಸಂಬಂಧ ಇದೀಗ ಅಕ್ರಮ ಕೂಟದ ಆರೋಪದ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಿಚಾರಣೆಗೆ ಕರೆಸಿದ್ದು, ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

Comments are closed.