40 ದಿನದ ಪುಟ್ಟ ಕಂದಗೆ ಹೃದಯ ಚಿಕಿತ್ಸೆ : ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ
ಮಂಗಳೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಫುಲ್ ಅಝ್ಮಾನ್ ಎಂಬ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯುವ ಆಂಬ್ಯುಲೆನ್ಸ್ ಮಂಗಳೂರಿನಿಂದ ಹೊರಟಿತು.
ಉಪ್ಪಿನಂಗಡಿ ಮೂಲಕ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಂಬ್ಯುಲೆನ್ಸ್ ಸಂಚರಿಸಿದ ವೇಳೆ ಉಪ್ಪಿನಂಗಡಿ,ನೆಲ್ಯಾಡಿ,ಗುಂಡ್ಯ ಕಡೆಗಳಲ್ಲಿ ಪೋಲೀಸರು, ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರು ,ಸಾರ್ವಜನಿಕರು ಸಂಚಾರ ಸುಗಮಗೊಳಿಸಿ ಅಂಬ್ಯುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸ್ಧಳೀಯ ಅಂಬ್ಯುಲೆನ್ಸ್ ಗಳು , ಪೋಲೀಸ್ ವಾಹನಗಳು ಮಗುವನ್ನು ತರುತ್ತಿದ್ದ ವಾಹನದ ಮೊದಲು ಸಂಚರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟವು . ಅಲ್ಲದೆ ಸಾರ್ವಜನಿಕರೂ ರಸ್ತೆಗೆ ಬರದೇ ಸಹಕಾರ ನೀಡಿದರು
ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ ಮಾರ್ಗವಾಗಿ ಹೊರಡಿದ್ದು ಹಾಸನ, ನೆಲಮಂಗಲ ಮೂಲಕ ಬೆಂಗಳೂರು ತಲುಪಲಿದೆ. ಝೀರೋ ಟ್ರಾಫಿಕ್ ವ್ಯವಸ್ಥೆಗೆ ರಾಜ್ಯ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಿತ್ತು.