ಮೋದಿ,ನಡ್ಡಾ ನೇತೃತ್ವದಲ್ಲಿ ಕೇಂದ್ರ ಸರಕಾರದ ಪ್ರಮುಖ ಸಚಿವರ ಸಭೆ ರದ್ದು | ವಿಸ್ತರಣೆಯೂ ಮುಂದೂಡಿಕೆ

ಬುಧವಾರ ನಡೆಯಬಹುದು ಎಂದು ನಿರೀಕ್ಷಿಸಲಾಗಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿದೆ.ಇದಕ್ಕೂ ಮುನ್ನ ಪ್ರಮುಖ ಸಚಿವರೊಂದಿಗೆ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮಂಗಳವಾರ ಸಂಜೆ ಸಭೆ ಏರ್ಪಡಿಸಿದ್ದರು. ಆದರೆ ಇದೀಗ ಈ ಸಭೆ ರದ್ದಾಗಿದೆ ಎಂದು ವರದಿ ತಿಳಿಸಿದೆ.

 

ಮಂಗಳವಾರ ಸಂಜೆ ಐದು ಗಂಟೆಗೆ ನರೇಂದ್ರ ಮೋದಿ ಸಚಿವರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದರು. ಎರಡು ವರ್ಷಗಳಲ್ಲಿ ಸಚಿವರ ಪ್ರದರ್ಶನ ಮತ್ತು ಮುಂದಿನ ದಿನಗಳ ಯೋಜನೆಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಗಿತ್ತು. ಅದರೆ ಈ ಸಭೆ ರದ್ದಾಗಿದ್ದು, ಸಂಪುಟ ವಿಸ್ತರಣೆ ಮತ್ತೆ ಮುಂದೂಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತ ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ, ಪಿಯೂಶ್ ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಈ ಸಭೆಯಲ್ಲಿ ಭಾಗವಹಿಸುವವರಿದ್ದರು.

Leave A Reply

Your email address will not be published.