ಕಡಬ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆಗೆ ಚಾಲನೆ

ಕಡಬ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರನ್ನು ಗುರುತಿಸಿ ಅವರಿಗೂ ಆಹಾರದ ಕಿಟ್‌ಗಳನ್ನು ಸರಕಾರ ಕಡೆಯಿಂದ ಕೊಡಿಸಬೇಕೆಂದು ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರ ಸಚಿವರಲ್ಲಿ ಮನವಿ ಮಾಡಿಕೊಂಡಂತೆ ಕೊರೋನಾದ 2ನೇ ಅಲೆಯ ಸಂದರ್ಭ ಕಟ್ಟಡ ಮತ್ತು ಇತರೆ ನಿರ್ಮಾಣದ ಕಾರ್ಮಿಕರಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣದ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೀಡಿದ ಆಹಾರದ ಕಿಟ್ ಕಡಬ ತಾಲೂಕಿನಲ್ಲಿ ವಿತರಣೆಗೆ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಚಾಲನೆ ನೀಡಿದರು.

 

ಈ ಸಂದರ್ಭದಲ್ಲಿ ಸುಳ್ಯ ವಿ.ಸ.ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ,ಕೃಷ್ಣ ಶೆಟ್ಟಿ ಕಡಬ,ಭಾಸ್ಕರ ಗೌಡ ಇಚ್ಲಂಪಾಡಿ,ಇಲಾಖೆಯ ಅಧಿಕಾರಿಗಳು , ಫಲಾನುಭವಿಗಳು ಮೊದಲಾದವರು ಉಪಸ್ಥಿತರಿದ್ದರು.

Leave A Reply

Your email address will not be published.