Talapathy Vijay: ತಮಿಳುನಾಡಿನ ಈ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವೆ – ತಳಪತಿ ವಿಜಯ್ ಘೋಷಣೆ!!

Talapathy Vijay: ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಖ್ಯಾತ ನಟ ತಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷವು ಕೂಡ ಸ್ಪರ್ಧಿಸಲಿದೆ. ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ರ್ಯಾಲಿ, ಸಮಾವೇಶಗಳನ್ನು ನಡೆಸುತ್ತಾ ವಿಜಯ ಅವರು ಚುನಾವಣಾ ತಯಾರಿ ನಡೆಸಿದ್ದಾರೆ. ಇದರ ನಡುವೆ ಅವರು ತಾವು ಸ್ಪರ್ಧಿಸುವ ಕ್ಷೇತ್ರ ಯಾವುದು ಎಂದು ಘೋಷಣೆ ಮಾಡಿದ್ದಾರೆ.

ಹೌದು, ಮಧುರೈನಲ್ಲಿ ಗುರುವಾರ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ 2ನೇ ರಾಜ್ಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು ಮಧುರೈನ ಪೂರ್ವ ಕ್ಷೇತ್ರದಿಂದ ವಿಜಯ್ ಸ್ಪರ್ಧೆ ಮಾಡೋದಾಗಿ ಹೇಳಿದ್ದಾರೆ.
ಅಲ್ಲದೆ ಯಾವುದೇ ಪಕ್ಷದ ಜೊತೆ ಮೈತ್ರಿ ಕೂಡ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳು ಇವೆ. ಎಲ್ಲಾ ಕ್ಷೇತ್ರಗಳಲ್ಲಿ ಇವರ ಪಕ್ಷ ಸ್ಪರ್ಧೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ. ‘ನಾವು ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೇವೆ. ನಿಮ್ಮ ಮನೆಯಿಂದ ಸ್ಪರ್ಧಿಸುವ ಅಭ್ಯರ್ಥಿ ಮತ್ತು ನಾನು ಇಬ್ಬರೂ ಒಂದೇ ಎಂದುಕೊಳ್ಳಿ. ಅವರಿಗೆ ಮತ ಹಾಕುವುದು ನನಗೆ ಮತ ಹಾಕಿದಂತೆ’ ಎಂದು ದಳಪತಿ ವಿಜಯ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ನೇರವಾಗಿ ಗುರಿಯಾಗಿಸಿಕೊಂಡು, ತಮಿಳುನಾಡಿನ ಅಗತ್ಯಗಳನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ವಿಜಯ್ ಆರೋಪಿಸಿದರು. ನಮಗೆ ಮುಖ್ಯವಾದದ್ದನ್ನು ನೀವು ಮಾಡುತ್ತಿಲ್ಲ. ನೀವು ತುಷ್ಠೀಕರಣಕ್ಕಾಗಿ ಆರ್ಎಸ್ಎಸ್ ಅನ್ನು ಬಳಸಿಕೊಳ್ಳುತ್ತಿದ್ದೀರಿ. 2029ರವರೆಗೆ ನಿಮ್ಮ ಪ್ರಯಾಣ ಸುಗಮವಾಗಿರಬಹುದು ಎಂದು ಭಾವಿಸಿದ್ದೀರಿ. ಆದರೆ, ಕಮಲದ ದಳಗಳ ಮೇಲೆ ನೀರಿನ ಹನಿಗಳು ಅಂಟಿಕೊಳ್ಳುವುದಿಲ್ಲ ಎಂಬುದನ್ನು ನಾನು ನಿಮಗೆ ಸ್ಪಷ್ಟಪಡಿಸುತ್ತೇನೆ ಎನ್ನುವ ಮೂಲಕ ತಮಿಳರು ಬಿಜೆಪಿಗೆ ಅಂಟಿಕೊಳ್ಳುವುದಿಲ್ಲ ಎಂಬುದನ್ನು ಮಾರ್ಮಿಕವಾಗಿ ಹೇಳಿದರು.
DK Shivkumar: ವಿಧಾನಸಬೆಯಲ್ಲಿ RSS ‘ನಮಸ್ತೆ ಸದಾ ವತ್ಸಲೆ’ ಗೀತೆ ಹಾಡಿದ ಡಿಕೆ ಶಿವಕುಮಾರ್ !! ವಿಡಿಯೋ ವೈರಲ್
Comments are closed.