Home News Vehicle: ವಾಹನ ಸವಾರರಿಗೆ ಗುಡ್‌ನ್ಯೂಸ್! ಇನ್ಮೇಲೆ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮೇಲೆ 50%...

Vehicle: ವಾಹನ ಸವಾರರಿಗೆ ಗುಡ್‌ನ್ಯೂಸ್! ಇನ್ಮೇಲೆ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮೇಲೆ 50% ರಿಯಾಯಿತಿ!

Hindu neighbor gifts plot of land

Hindu neighbour gifts land to Muslim journalist

Vehicle : ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಆಗಸ್ಟ್ 23ರಿಂದ ಸೆಪ್ಟೆಂಬ‌ರ್ 12ರವರೆಗೆ ಮಾತ್ರ ಶೇ. 50ರಷ್ಟು ರಿಯಾಯಿತಿ ದಂಡ ಪಾವತಿಗೆ ಅವಕಾಶ ನೀಡಲಾಗಿದೆ.

ಈ ಅಧಿಕೃತ ಸೂಚನೆಯನ್ನು ರಾಜ್ಯ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್‌. ಅವರು ಹೊರಡಿಸಿದ್ದು, ಇದರ ಪ್ರಕಾರ, ಸೆಪ್ಟೆಂಬ‌ರ್ 12 ರವರೆಗೆ ಈ ಯೋಜನೆ ಜಾರಿಯಲ್ಲಿದ್ದು, 2023ರ ಫೆಬ್ರವರಿ 11 ರವರೆಗೆ ಪೊಲೀಸ್ ಇಲಾಖೆಯ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಕರ್ನಾಟಕ ಸ್ಟೇಟ್ ಪೊಲೀಸ್‌ (ಕೆಎಸ್‌ಪಿ) ಆ್ಯಪ್, ಬಿಟಿಪಿ ಅಸ್ಲಂ ಆ್ಯಪ್, ಹತ್ತಿರದ ಸಂಚಾರ ಪೊಲೀಸ್‌ ಠಾಣೆ ಅಥವಾ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ದಂಡ ಪಾವತಿಸಬಹುದಾಗಿದೆ.