Resigns: ನಟಿಗೆ ಲೈಂಗಿಕ ದೌರ್ಜನ್ಯ ಆರೋಪ; ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ!Ko

Share the Article

Resigns: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಮಮ್‌ಕೂಟತಿಲ್ ಅವರು ತಮ್ಮ ವಿರುದ್ಧ ಕೇಳಿಬಂದ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ (Resigns) ಸಲ್ಲಿಸಿದ್ದಾರೆ.

ಮಲಯಾಳಂ ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್ ಅವರು ಮಾಡಿದ ಗಂಭೀರ ಆರೋಪದ ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡಿದ್ದಾರೆ.

ರಾಹುಲ್ ಅವರು ತಮಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿ, ಹೋಟೆಲ್‌ಗೆ ಆಹ್ವಾನಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ರಿನಿ ಬುಧವಾರ ಆರೋಪಿಸಿದ್ದರು. ಈ ಆರೋಪಕ್ಕೆ ಮತ್ತಷ್ಟು ಬಲ ತುಂಬುವಂತೆ, ಲೇಖಕಿ ಹನಿ ಭಾಸ್ಕರನ್ ಕೂಡ ರಾಹುಲ್ ವಿರುದ್ಧ ಈ ಹಿಂದೆ ಹಲವು ಮಹಿಳೆಯರು ದೂರು ನೀಡಿದ್ದರೂ, ಪಕ್ಷವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಹಿರಂಗಪಡಿಸಿದ್ದರು.

Comments are closed.