ಇಂದು (ಫೆ.8) ಇದ್ಪಾಡಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಸನ್ಮಾನ ಕಾರ್ಯಕ್ರಮ, ಸಾಂಸ್ಕೃತಿಕ ವೈವಿಧ್ಯ
ಇಂದು (ಫೆ.8) ಇದ್ಪಾಡಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ, ಸನ್ಮಾನ ಕಾರ್ಯಕ್ರಮ, ಸಾಂಸ್ಕೃತಿಕ ವೈವಿಧ್ಯ
ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಶ್ರೀ ಶಿರಾಡಿ ದೈವಸ್ಥಾನ ಇದ್ಪಾಡಿ ಮಂಜಕೊಟ್ಯ ಇದರ ವಾರ್ಷಿಕ ಮಾರಿ ನೇಮೋತ್ಸವದ ಪ್ರಯುಕ್ತ ಶ್ರೀ ಶಿರಾಡಿ ಭಕ್ತವೃಂದ ಇದ್ಪಾಡಿ ಇವರ ಪ್ರಾಯೋಜಕತ್ವದಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ ಹಾಗೂ 4 ನೇ ವರ್ಷದ ಸನ್ಮಾನ ಕಾರ್ಯಕ್ರಮ, ಸಾಂಸ್ಕೃತಿಕ ವೈವಿಧ್ಯ ಫೆ.08 ರಂದು ಸಂಜೆ ಇದ್ಪಾಡಿ ಆಟದ ಮೈದಾನದಲ್ಲಿ ನಡೆಯಲಿದೆ.
ಸಂಜೆ ವೇದಮೂರ್ತಿ ಕೆ.ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರ ನೇತೃತ್ವದಲ್ಲಿ ಶ್ರೀ ದುರ್ಗಾಪೂಜೆ ಬಳಿಕ ಸಭಾ ಕಾರ್ಯಕ್ರಮ, ಸನ್ಮಾನ ನಡೆಯಲಿದೆ. . ಶ್ರೀ ಶಿರಾಡಿ ಭಕ್ತವೃಂದದ ಅಧ್ಯಕ್ಷ ಜಗದೀಶ್ ಅಮೀನ್ ಮಾರುತಿಪುರರವರ ಸಭಾಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಅವರು ದುರ್ಗಾಪೂಜೆಯ ಮಹತ್ವ ಎಂಬ ವಿಷಯದಲ್ಲಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಅತಿಥಿಗಳಾಗಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ಬೋಳೋಡಿ ಭಾಗವಹಿಸಲಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿಯವರು ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ.
ಇದ್ಪಾಡಿ ಶ್ರೀ ಶಿರಾಡಿ ದೈವಸ್ಥಾನ ಮಂಜಕೊಟ್ಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಡಮಜಲು ಸುಭಾಷ್ ರೈ ಮತ್ತು ಪ್ರಧಾನ ಕಾರ್ಯದರ್ಶಿ ಸುಧಾಕರ ರೈ ಮುಂಡಾಳಗುತ್ತುರವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಮಕ್ಕಳಿಂದ ಹಾಗೂ ಊರವರಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ ಬಳಿಕ ಶರತ್ ಆಳ್ವ ಕೂರೇಲು ಸಾರಥ್ಯದಲ್ಲಿ ಬೊಳ್ಳಿ ಬೊಲ್ಪು ಕಲಾವಿದರು ಪುತ್ತೂರು ಅಭಿನಯಿಸುವ ` ಕಾಸ್‌ದ ಕಸರತ್ತ್ ( ಕುಸಲತ್ತ್)’ ಎಂಬ ತುಳು ಹಾಸ್ಯಮಯ ನಾಟಕ ನಡೆಯಲಿದೆ.